ಡೆಪ್ಯುಟಿ ಸ್ಪೀಕರ್‌ ಆನಂದ ಮಾಮನಿ ಬೆಂಗಳೂರಿಗೆ ಶಿಫ್ಟ್‌

ಬೆಳಗಾವಿ; ಅನಾರೋಗ್ಯ ಹಿನ್ನೆಲೆಯಲ್ಲಿ ಚೆನ್ನೈನ ‌ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕರೆತರಲಾಗಿದೆ. ಆನಂದ ಮಾಮನಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದೆ.

 ಇಂದು  ಹುಕ್ಕೇರಿ ಹಿರೇಮಠದ ಚಂದ್ರಶೇಖರ್​ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಾಸಕ ದುರ್ಯೋಧನ ಐಹೊಳೆ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ ಅವರ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಮಾತನಾಡಿದ ಶ್ರೀಗಳು, ಉಪಸಭಾಪತಿ ಆನಂದ ಮಾಮನಿ ಅವರ ಆರೋಗ್ಯ ಚೆನ್ನಾಗಿದೆ. ಯಾವುದೇ ಆತಂಕ ಬೇಡ. ಆನಂದ ಮಾಮನಿ ಗುಣಮುಖರಾಗಲಿ. ಅವರ ಆರೋಗ್ಯ ಚೇತರಿಕೆಗೆ ಎಲ್ಲರೂ ದೇವರಲ್ಲಿ ಪಾರ್ಥನೆ ಮಾಡಬೇಕು. ಕ್ಷೇತ್ರದ ಜನರು ಭಯಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

Share Post

Leave a Reply

Your email address will not be published.