ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು; ಸ್ಕ್ಯಾಮ್‌ ರಾಮಯ್ಯ ಪುಸ್ತಕ ಬಿಡುಗಡೆ

ಬೆಂಗಳೂರು; ಪೇಸಿಎಂ ಪೋಸ್ಟರ್‌ ರಿಲೀಸ್‌ ಆದ ಮೇಲೆ ಕಾಂಗ್ರೆಸ್‌ ಹಾಗೂ ಬಿಜೆಪಿ ಜಟಾಪಟಿ ಜೋರಾಗಿದೆ. ಕಾಂಗ್ರೆಸ್‌ ನಲವತ್ತು ಪರ್ಸೆಂಟ್‌ ಕಮೀಷನ್‌ ವಿಚಾರ ಎತ್ತಿಕೊಂಡು ಸರ್ಕಾರದ ವಿರುದ್ಧ ಮುಗಿಬೀಳುತ್ತಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡಾ ಕಾಂಗ್ರೆಸ್‌ ವಿರುದ್ಧ ತಂತ್ರಗಾರಿಕೆ ಶುರು ಮಾಡಿದೆ. ಅದರ ಭಾಗವಾಗಿ ಬಿಜೆಪಿ ʻಸ್ಕ್ಯಾಮ್‌ ಸಿದ್ದರಾಮಯ್ಯʼ ಎಂಬ ಪುಸ್ತಕವನ್ನು ಬಿಡುಗಡೆ ಮಾಡಿದೆ. 

   ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ಅಧಿಕಾರಾವಧಿಯ ಶೇ. 100 ಭ್ರಷ್ಟಾಚಾರವನ್ನು ಅನಾವರಣಗೊಳಿಸುವ ‘ಸ್ಕ್ಯಾಮ್ ರಾಮಯ್ಯ’ ಪುಸ್ತಕವನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡಿದ ನಳಿನ್‌ ಕುಮಾರ್ ಕಟೀಲ್, ‘ಪೇ ಸಿಎಂ’ ಎನ್ನುವುದು ಕಾಂಗ್ರೆಸ್ ಮೇಡಂಗೆ ಮಾಡುವ ಪೇಮೆಂಟ್ ಬಗ್ಗೆ ಉಲ್ಲೇಖ ಇದಾಗಿದೆ. ಶಿವಕುಮಾರ್ ಚೀಟಿ ನುಂಗಿದ್ದನ್ನು ನೋಡಿದ್ದೀರಿ. ಅವರು ಚೀಟಿ ಶಿವಕುಮಾರ್ ಆಗಿದ್ದಾರೆಂದು ಟಾಂಗ್ ನೀಡಿದರು.

ಸಿದ್ದರಾಮಯ್ಯ ಅವರು ಕೋರ್ಟಿನ ಆದೇಶದನ್ವಯ ಬಂಧನಕ್ಕೊಳಗಾಗಲಿದ್ದಾರೆ ಎಂದ ಅವರು, ದೇಶದ ಬಹು ಹಳೆಯದಾದ ಕಾಂಗ್ರೆಸ್ ಪಕ್ಷವು ಸುದೀರ್ಘ ಅವಧಿಯ ರಾಜಕಾರಣದಲ್ಲಿ ಭ್ರಷ್ಟಾಚಾರಕ್ಕೆ ಅತಿ ದೊಡ್ಡ ಕೊಡುಗೆ ಕೊಟ್ಟಿದೆ. ದೇಶದಲ್ಲಿ ಉಗ್ರವಾದ ಭಯೋತ್ಪಾದನೆಗೂ ಕಾಂಗ್ರೆಸ್ ಪಕ್ಷವೇ ಕಾರಣ. 1947ರಿಂದ 2014ವರೆಗೆ ಗರಿಷ್ಠ ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರಕ್ಕೆ ಬೃಹತ್ತಾದ ಕೊಡುಗೆ ನೀಡಿದೆ ಎಂದರು.

Share Post

Leave a Reply

Your email address will not be published.