ಬೆಂಗಳೂರಲ್ಲಿ ನವೋದ್ಯಮ ಪಾರ್ಕ್‌ ಸ್ಥಾಪನೆ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು; ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಪ್ರೋತ್ಸಾಹಿಸುವುದಕ್ಕಾಗಿ ಬೆಂಗಳೂರಿನಲ್ಲಿ ನವೋದ್ಯಮ ಪಾರ್ಕ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಇಂದು ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ ಆರಂಭವಾಗಿದ್ದು ಅದನ್ನು ಉದ್ಘಾಟಿಸಿ ಸಿಎಂ ಬೊಮ್ಮಾಯಿ ಮಾತನಾಡಿದರು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ 6 ತಿಂಗಳಲ್ಲಿ ನವೋದ್ಯಮ ಪಾರ್ಕ್ ಸ್ಥಾಪನೆಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಇದೇ ವೇಳೆ ತಿಳಿಸಿದರು.  ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಆಕರ್ಷಿಸುವುದಕ್ಕೆ ರಾಜ್ಯ ಸರ್ಕಾರ ಕೆಲಸ‌ ಮಾಡ್ತಿದೆ. ಈ ಕಾರಣದಿಂದಾಗಿಯೇ ಆರು ಹೊಸ ನಗರಗಳ ನಿರ್ಮಾಣ ಮಾಡಲು ನಿರ್ಧರಿಸಿದ್ದೇವೆ ಎಂದು ಇದೇ ವೇಳೆ ತಿಳಿಸಿದ್ದಾರೆ.

 

Share Post

Leave a Reply

Your email address will not be published.