ಜಾರಕಿ ಹೊಳಿ ವಿರುದ್ಧ ಪೊಲೀಸರಿಗೆ ದೂರು; ಡಿಕೆಶಿ

ಬೆಂಗಳೂರು; ಬಿಜೆಪಿಯವರು ಸಾವಿರಾರು ಕೋಟಿ ರೂಪಾಯಿ ಅಕ್ರಮ ಹಣ ಇಟ್ಟಿದ್ದಾರೆ. ಅದರಿಂದ ಮತದಾರರನ್ನು ಕೊಳ್ಳುವುದಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಪ್ರತಿ ಮತಕ್ಕೆ ಆರು ಸಾವಿರ ರೂಪಾಯಿ ನೀಡುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಖರ್ಚು ಮಾಡಿದ್ದಕ್ಕಿಂತ ಹೆಚ್ಚು ಹಣ ಖರ್ಚು ಮಾಡುತ್ತೇವೆ ಅಂತಿದ್ದಾರೆ. ಈ ಬಗ್ಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ. ವಿಡಿಯೋ ದಾಖಲೆ ಸಮೇತ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ.

 

Share Post

Leave a Reply

Your email address will not be published.