ಇಂದು ಕಾಂಗ್ರೆಸ್‌ ನಾ ನಾಯಕಿ ಕಾರ್ಯಕ್ರಮ; ಎಲ್ಲೆಲ್ಲೂ ರಾರಾಜಿಸ್ತಿರುವ ಪ್ರಿಯಾಂಕಾ ಕಟೌಟ್‌ಗಳು

ಬೆಂಗಳೂರು; ಇಂದು ಕಾಂಗ್ರೆಸ್‌ ಮಹಿಳಾ ಸಮಾವೇಶವನ್ನು ಆಯೋಜಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಾ ನಾಯಕಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನ ರಸ್ತೆಯಲ್ಲಿ ಪ್ರಿಯಾಂಕಾ ಗಾಂಧಿಯವರ ಕಾಟೌಟ್‌ಗಳು ರಾರಾಜಿಸುತ್ತಿವೆ.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಏನೆಲ್ಲಾ ಸೌಲಭ್ಯ ಕಲ್ಪಿಸಲಾಗುತ್ತದೆ ಎಂಬುದನ್ನು ಈ ಸಮಾವೇಶದಲ್ಲಿ ತಿಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಾ ನಾಯಕಿ ಸಮಾವೇಶ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಸಮಾವೇಶ ಮಹಿಳಾ ಕಾರ್ಯಕರ್ತರಿಗೆ ಮಾತ್ರ ಸೀಮಿತವಾಗಿದೆ. ಇಲ್ಲಿ ಪುರುಷ ಕಾರ್ಯಕರ್ತರಿಗೆ ಪ್ರವೇಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವೇದಿಕೆಯಲ್ಲಿ ಮಹಿಳಾ ನಾಯಕಿರಿಗಷ್ಟೇ ಅವಕಾಶ ನೀಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಮಾವೇಶ ನಡೆಯಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಂ.ಬಿ. ಪಾಟೀಲ ಮುಂತಾದ ನಾಯಕರು ಪಾಲ್ಗೊಳ್ಳಲಿದ್ದಾರೆ.

Share Post

Leave a Reply

Your email address will not be published.