ಹಿಜಾಬ್‌ ವಿವಾದ: ಇದು ಬಹಿರಂಗ ಚರ್ಚೆ ಅಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು. ಇದು ಅತ್ಯಂತ ಸೂಕ್ಷ್ಮ ವಿಚಾರ ಏನೋನು ಹೇಳಿಕೆ ಕೊಡಲು ಬರುವುದಿಲ್ಲ. ಇದರ ಮಧ್ಯೆ ಅರ್ಜಿ ವಿಚಾರಣೆ ಕೋರ್ಟ್‌ನಲ್ಲಿ ಇದೆ. ನ್ಯಾಯಾಲಯದ ತೀರ್ಪು ಬರುವವರೆಗೂ ಏನೂ ನಿರ್ಧಾರ ಮಾಡಲಾಗುವುದಿಲ್ಲ ಎಂದಿದ್ದಾರೆ.

ಇಂತಹ ಸೂಕ್ಷ್ಮ ವಿಚಾರಗಳನ್ನು ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವಿಲ್ಲ. ಮೊದಲಿನಿಂದಲೂ ಯಾವ ರೀತಿ ಸಂಸ್ಕೃತಿ, ಸಂಪ್ರದಾಯ ರೂಢಿಸಿಕೊಂಡು ಬಂದಿದ್ದಾರೋ ಎಲ್ಲವನ್ನೂ ಚರ್ಚೆ ಮಾಡಬೇಕಾಗುತ್ತದೆ. ಮೊದಲಿನಿಂದಲೂ ರೂಢಿಸಿಕೊಂಡು ಬಂದಿರುವ ಪದ್ದತಿಯನ್ನು ಪ್ರಶ್ನೆ ಮಾಡುವುದು ಅಷ್ಟು ಸುಲಭವಲ್ಲ.
ಕೂಲಂಕುಷವಾಗಿ ಚರ್ಚೆ ಮಾಡಿದ ಬಳಿಕವಷ್ಟೇ ನಿರ್ಧಾರ ತಿಳಿಸಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ರು.

Share Post