ಧ್ರವನಾರಾಯಣ್‌ರನ್ನು ನೆನೆದು ಕಣ್ಣೀರಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಇಂದು ಮುಂಜಾನೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ವಿಚಾರ ತಿಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧ್ರುವನಾರಾಯಣ್‌ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಷ್ಟೇ ಅಲ್ಲ, ನನ್ನ ಕುಟುಂಬವಾಗಿದ್ದರು ಎಂದು ಹೇಳಿ ಕಣ್ಣೀರು ಹಾಕಿದರು.

ಧ್ರುವನಾರಾಯಣ್ ಅವರಿಗೆ ರಕ್ತದ ವಾಂತಿ ಆಗಿದ್ದು, ನಂತರ ಉಸಿರಾಟ ಸಮಸ್ಯೆ ಉಂಟಾಗಿದೆ ಎಂದು ನಮ್ಮ ವೈದ್ಯರು ಮಾಹಿತಿ ಕೊಟ್ಟರು. ಯಾರನ್ನು ನೋವಿಸಬಾರದು ಎಂಬ ಗುಣ ಧ್ರುವನಾರಾಯಣ್‌ ಅವರಲ್ಲಿತ್ತು. ಎಲ್ಲರನ್ನೂ ಒಂದೇ ರೀತಿಯಲ್ಲಿ ಹಾಗೂ ಪ್ರೀತಿಯಿಂದ ನೋಡುತ್ತಿದ್ದರು. ಅನೇಕ ಬಾರಿ ನನಗೆ ಸಮಾಧಾನ ಮಾಡಿದ್ದರು ಎಂದು ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

Share Post