ಫೆಬ್ರವರಿ 6ಕ್ಕೆ ಬೆಂಗಳೂರಿಗೆ ಬರ್ತಾರೆ ಮೋದಿ; ರೋಡ್‌ಶೋಗೆ ಚಿಂತನೆ

ಬೆಂಗಳೂರು; ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಕೇಂದ್ರ ಬಿಜೆಪಿ ನಾಯಕರು ಈ ಕಡೆ ಹೆಚ್ಚು ಗಮನ ನೆಟ್ಟಿದ್ದಾರೆ. ಮೊನ್ನೆಯಷ್ಟೇ ಹುಬ್ಬಳ್ಳಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ರೋಡ್‌ ಶೋ ಜನರನ್ನು ಸೆಳೆಯೋ ಪ್ರಯತ್ನ ಮಾಡಿದ್ದರು. ಇದೀಗ ಮತ್ತೆ ಫೆಬ್ರವರಿ 6ರಂದು ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದು, ರೋಡ್‌ ಶೋ ನಡೆಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಹೆಚ್‍ಎಎಲ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಆ ಕಾರ್ಯಕ್ರಮದ ಆಗಮನದ ವೇಳೆ ಬೆಂಗಳೂರಲ್ಲಿ ರೋಡ್ ಶೋಗೆ ರಾಜ್ಯ ಬಿಜೆಪಿ ಮನವಿ ಮಾಡಿದೆ ಎನ್ನಲಾಗಿದೆ. ಹುಬ್ಬಳ್ಳಿಯಲ್ಲಿ ಮೋದಿಯವರು ಮೂರು ವಿಧಾನಸಭಾ ಕ್ಷೇತ್ರಗಳನ್ನು ಟಾರ್ಗೆಟ್‌ ಮಾಡಿ ರೋಡ್‌ ಶೋ ನಡೆಸಿದ್ದರು. ಅದೇ ರೀತಿಯ ಬೆಂಗಳೂರಿನ ರೋಡ್‌ ಶೋನಲ್ಲೂ ಮೂರು ಕ್ಷೇತ್ರಗಳನ್ನು ಕವರ್‌ ಆಗುವಂತೆ ಪ್ಲ್ಯಾನ್‌ ಮಾಡಲಾಗುತ್ತಿದೆ ಎನ್ನಲಾಗಿದೆ.

ಮಹದೇವಪುರ, ಕೆ.ಆರ್.ಪುರಂ, ಸಿ.ವಿ.ರಾಮನ್ ನಗರಗಳನ್ನು ಕೇಂದ್ರವಾಗಿಟ್ಟುಕೊಂಡು ಮೋದಿ ರೂಟ್‌ ಮ್ಯಾಪ್‌ ತಯಾರಿಸಲಾಗುತ್ತಿದೆ ಎಂದು ಹೇಳಲಾಗಿದೆ.

Share Post

Leave a Reply

Your email address will not be published.