ಆಟೋ ಚಾಲಕರಿಂದ ಪ್ರತಿಭಟನೆ; ಪ್ರಯಾಣಿಕರ ಪರದಾಟ

ಬೆಂಗಳೂರು; ಬೈಕ್‌ ಟ್ಯಾಕ್ಸಿ ನಿಷೇಧ ಆಗ್ರಹಿಸಿ ಇಂದು ಆಟೋ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೆಜೆಸ್ಟಿಕ್‌ ಬಳಿ ಆಟೋ ಚಾಲಕರು ರಸ್ತೆಗೆ ಅಡ್ಡಲಾಗಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಇದರಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಹೀಗಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡರು.

ಇನ್ನೊಂದೆಡೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಆಟೋ ಚಾಲಕರು ಪ್ರಯತ್ನಿಸಿದ್ದಾರೆ. ಇದನ್ನು ತಡೆದಿರುವ ಪೊಲೀಸರು, ಪ್ರತಿಭಟನಾಕಾರರನ್ನು ಬಂಧಿಸಿ ಬೇರೆಗೆ ಕರೆದೊಯ್ದಿದ್ದಾರೆ. ಆಟೋ ಬಂದ್‌ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Share Post