ಪುನೀತ್‌ ಜನ್ಮದಿನವನ್ನು ಸ್ಪೂರ್ತಿಯ ದಿನವಾಗಿ ಆಚರಿಸಲು ತೀರ್ಮಾನ

ಬೆಂಗಳೂರು; ಪವರ್‌ ಸ್ಟಾರ್‌ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿಯ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಅವರು ಟ್ವೀಟ್‌ ಮಾಡಿದ್ದಾರೆ. ಸಿಎಂ ಇದಕ್ಕೆ ಒಪ್ಪಿಗೆ ನೀಡಿದ್ದು, ಸರ್ಕಾರದಿಂದ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ.

ಪುನೀತ್‌ ರಾಜ್‌ಕುಮಾರ್‌ ಅವರು ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಿ ಅನೇಕರಿಗೆ ಸ್ಫೂರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ವಿಶೇಷ ಗೌರವ ನೀಡಲು ಮುಂದಾಗಿದೆ. ಸರ್ಕಾರದ ವತಿಯಿಂದಲೇ ಪುನೀತ್‌ ಜನ್ಮದಿನವನ್ನು ಸ್ಪೂರ್ತಿಯ ದಿನವನ್ನಾಗಿ ಆಚರಿಸಲು ಸಿಎಂಗೆ ಮನವಿ ಮಾಡಲಾಗಿತ್ತು. ಇದಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವ ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಈ ಬಗ್ಗೆ ಸಚಿವ ಸುನಿಲ್‌ ಕುಮಾರ್‌ ಮಾಡಿದ ಟ್ವೀಟ್‌ನಲ್ಲಿ ಏನಿದೆ..?
‘ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನುಮುಂದೆ ಸ್ಫೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ’

Share Post

Leave a Reply

Your email address will not be published.