ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರ; ಕೋಲಾರದಲ್ಲೇ ಸ್ಪರ್ಧಿಸುವಂತೆ ಒತ್ತಡ

ಬೆಂಗಳೂರು; ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡೋದಾಗಿ ಹೇಳಿದ್ದರು. ಆದ್ರೆ, ಹೈಕಮಾಂಡ್‌ ಕೋಲಾರ ಬೇಡ, ವರುಣಾದಲ್ಲೇ ಸ್ಪರ್ಧೆ ಮಾಡಿ ಎಂದಿದೆ. ಆದ್ರೆ ಸಿದ್ದರಾಮಯ್ಯ ಅವರು ಕೋಲಾರದಲ್ಲೇ ಸ್ಪರ್ಧೆ ಮಾಡಬೇಕು ಅಂತ ಕೋಲಾರದ ಜನ ಪಟ್ಟು ಹಿಡಿದಿದ್ದಾರೆ. ಇಂದು ಸಾವಿರಾರು ಜನರು ಕೋಲಾರದಿಂದ ಆಗಮಿಸಿದ್ದು, ಸಿದ್ದರಾಮಯ್ಯ ಮನೆ ಮುಂದೆ ಜಮಾಯಿಸಿದ್ದಾರೆ.

ಕೋಲಾರದಿಂದ ಎಲ್ಲಾ ವರ್ಗದ ಮುಖಂಡರೂ ಆಗಮಿಸಿದ್ದು, ನಾವೆಲ್ಲರೂ ನಿಮಗೆ ಬೆಂಬಲ ಕೊಡುತ್ತೇವೆ. ನಿಮ್ಮನ್ನು ಗೆಲ್ಲಿಸಿಕೊಂಡು ಬರೋ ಜವಾಬ್ದಾರಿ ನಮ್ಮದು. ಕೋಲಾರದಲ್ಲೇ ನಿಲ್ಲಿ ಎಂದು ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಇತ್ತು ರಮೇಶ್‌ ಕುಮಾರ್‌ ಕೂಡಾ ಸಿದ್ದರಾಮಯ್ಯ ಅವರ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

ಇದೇ ವೇಳೆ ಮಾತನಾಡಿದರುವ ಸಿದ್ದರಾಮಯ್ಯ, ಹೈಕಮಾಂಡ್‌ ನನಗೆ ಯಾವುದೇ ಸೂಚನೆ ನೀಡಿಲ್ಲ. ಕೋಲಾರದಲ್ಲಿ ಸ್ಪರ್ಧೆ ಮಾಡಬೇಡಿ ಎಂದು ಹೇಳಿಲ್ಲ. ಒಂದೇ ಕ್ಷೇತ್ರದಲ್ಲಿ ನಿಮ್ಮನ್ನು ಕಟ್ಟಿಹಾಹುವ ಪ್ರಯತ್ನ ನಡೆಯುತ್ತಿದೆ. ನೀವು ರಾಜ್ಯಾದ್ಯಂತ ಸುತ್ತಾಡಬೇಕು ಎಂದು ಹೇಳಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

Share Post