ಕಿರ್ಲೋಸ್ಕರ್‌ ಮೋಟಾರ್ಸ್‌ ಉಪಾಧ್ಯಕ್ಷ ವಿಕ್ರಮ್‌ ಕಿರ್ಲೋಸ್ಕರ್‌ ನಿಧನ

ಬೆಂಗಳೂರು; ಟೊಯೋಟ ಕಿರ್ಲೋಸ್ಕರ್ ಮೋಟಾರ್‌ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ (64) ಅವ್ರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಿರ್ಲೋಸ್ಕರ್‌ ಅವರಿಗೆ ಕಳೆದ ತಡರಾತ್ರಿ ಮನೆಯಲ್ಲಿದ್ದಾಗ ಹೃದಯಾಘಾತ ಸಂಭವಿಸಿತ್ತು. ಕೂಡಲೇ ಅವರನ್ನು ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಯ್ತು. ಆದ್ರೆ ವೈದ್ಯರು ಎಷ್ಟೇ ಪ್ರಯತ್ನಪಟ್ಟರೂ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ.

ವಿಕ್ರಮ್ ಕಿರ್ಲೋಸ್ಕರ್ ಅವರು ಪತ್ನಿ ಗೀತಾಂಜಲಿ ಮತ್ತು ಮಗಳು ಮಾನಸಿ ಅವ್ರನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಹೆಬ್ಬಾಳದ ಚಿತಾಗಾರದಲ್ಲಿ ವಿಕ್ರಮ್‌ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Share Post

Leave a Reply

Your email address will not be published.