ಸಿದ್ದರಾಮಯ್ಯ ಎಲ್ಲಿ ನಿಂತರೂ ಬೆಂಬಲವಿದೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದರೂ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ಬಗ್ಗೆ ಬರುತ್ತಿರುವ ಸುದ್ದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್‌ ಅವರು, ಈ ರೀತಿ ಹೇಳಿದರು.

ಸಿದ್ದರಾಮಯ್ಯ ಅವರು ಕೋಲಾರವಾದರೂ ಆಯ್ಕೆ ಮಾಡಿಕೊಳ್ಳಲಿ, ವರುಣಾ ಕ್ಷೇತ್ರಕ್ಕಾದರೂ ಹೋಗಲಿ, ಬದಾಮಿಯನ್ನೇ ಬೇಕಾದರೂ ಆಯ್ಕೆ ಮಾಡಿಕೊಳ್ಳಲಿ ನಾವು ಅದನ್ನು ಗೌರವಿಸುತ್ತೇವೆ. ಕೆಪಿಸಿಸಿ ಅಧ್ಯಕ್ಷನಾಗಿ ನಾನು ಸಿದ್ದರಾಮಯ್ಯ ಅವರು ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತಾರೋ ಅದನ್ನು ನಾನು ಬೆಂಬಲಿಸುತ್ತೇನೆ. ಆದ್ರೆ ಹೈಕಮಾಂಡ್‌ ಏನು ತೀರ್ಮಾನ ಮಾಡುತ್ತೋ ಅದು ಅಂತಿಮವಾಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇನ್ನು ಇದಕ್ಕೂ ಮೊದಲು ಡಿ.ಕೆ.ಶಿವಕುಮಾರ್‌ ಅವರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದರು. ಕಾಲಭಯರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಳೆ ಕಾಂಗ್ರೆಸ್‌ನ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಅದಕ್ಕೂ ಮೊದಲು ಡಿ.ಕೆ.ಶಿವಕುಮಾರ್‌ ಕಾಲಭೈರವನ ದರ್ಶನ ಪಡೆದಿದ್ದಾರೆ.

Share Post