ಸಲ್ಮಾನ್‌ ಖಾನ್‌ ಕೊಲೆ ಮಾಡುವುದಾಗಿ ಬೆದರಿಕೆ; ಗ್ಯಾಲಕ್ಸಿ ಅಪಾರ್ಟ್ಮೆಂಟ್‌ಗೆ ಬಿಗಿ ಪೊಲೀಸ್‌ ಭದ್ರತೆ

ಮುಂಬೈ; ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂಬೈನ ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್ಮೆಂಟ್‌ಗೆ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ. ಅಷ್ಟೇ ಅಲ್ಲದೆ, ಸಲ್ಮಾನ್‌ ಖಾನ್‌ಗೆ ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲೋದಾಗಿ ಸಲ್ಮಾನ್‌ ಖಾನ್‌ಗೆ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕೃಷ್ಣಮೃಗ ಬೇಟೆ ಮಾಡಿದ ಪ್ರಕರಣ ಸಂಬಂಧ ಬಿಷ್ಣೋಯ್‌ ಹಾಗೂ ಸಲ್ಮಾನ್‌ ಖಾನ್‌ ನಡುವೆ ವಿವಾದವಿದೆ. ಹೀಗಾಗಿಯೇ ಬಿಷ್ಣೊಯ್‌ ಟೀಮ್‌ ಹವಲು ಬಾರಿ ಸಲ್ಮಾನ್‌ ಖಾನ್‌ ಕೊಲೆಗೆ ಹಲವು ಬಾರಿ ಪ್ರಯತ್ನಿಸಿದ್ದಾರೆ. ಸದ್ಯ ಜೈಲಿನಲ್ಲಿರುವ ಬಿಷ್ಣೊಯ್‌ ಅಲ್ಲಿಂದಲೇ ಸಲ್ಮಾನ್‌ ಕೊಲೆಗೆ ಸ್ಕೆಚ್‌ ಹಾಕಿದ್ದಾನೆ ಎನ್ನಲಾಗಿದೆ.

Share Post