ಇಮ್ರಾನ್‌ ಖಾನ್‌ ಬಂಧನದ ಬೆನ್ನಲ್ಲೇ ಮಾಜಿ ಸಚಿವ ಖುರೇಷಿ ಕೂಡಾ ಅರೆಸ್ಟ್‌

ಇಸ್ಲಾಮಾಬಾದ್‌; ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನದ ನಂತರ ಪಾಕಿಸ್ತಾನದಲ್ಲಿ ಗಲಭೆಗಳು ಹೆಚ್ಚಾಗಿದೆ. ಈ ಬೆನ್ನಲ್ಲೇ ಮತ್ತೊಂದು ಬಂಧನವಾಗಿದೆ. ಇಮ್ರಾನ್‌ ಖಾನ್‌ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿದ್ದ ಮಖ್ದೂಮ್‌ ಶಾ ಮೆಹಮೂದ್‌ ಖುರೇಷಿ ಅವರನ್ನು ಬಂಧಿಸಲಾಗಿದೆ. ಕಳೆದ ರಾತ್ರಿ ಇಸ್ಲಾಮಾಬಾದ್‌ ಪೊಲೀಸರು ಖುರೇಷಿ ಅವರನ್ನು ಬಂಧಿಸಿದ್ದು, ಅಜ್ಞಾತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.

ಖುರೇಷಿಯವರು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಉಪಾಧ್ಯಕ್ಷರೂ ಆಗಿದ್ದಾರೆ. ಇಮ್ರಾನ್‌ ಖಾನ್‌ ಬಂಧನದ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ಗಲಭೆಗಳು ನಡೆಯುತ್ತಿವೆ. ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾದಲ್ಲಿ ನಡೆದ ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿ ಖುರೇಷಿರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಖುರೇಷಿ ಅವರು ಇಸ್ಲಾಮಾಬಾದ್‌ನ ಗಿಲ್ಗಿಟ್-ಬಾಲ್ಟಿಸ್ತಾನ್ ಹೌಸ್‌ನಲ್ಲಿದ್ದರು. ದಾಳಿ ನಡೆಸಿದ ಪೊಲೀಸರು ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡುಹೋಗಿದ್ದಾರೆ.

ಇದಕ್ಕೂ ಮೊದಲು ಖುರೇಷಿ ಅವರು ತಮ್ಮ ಪಕ್ಷದ ಕಾರ್ಯಕರ್ತರ ಜೊತೆ ಮಾತನಾಡಿದ್ದರು. ದೇಶದಲ್ಲಿ ನಿಜವಾದ ಸ್ವಾತಂತ್ರ್ಯಕ್ಕಾಗಿ ಹೋರಾಟವನ್ನು ಮುಂದುವರೆಸಿ ಎಂದು ಕರೆಕೊಟ್ಟಿದ್ದರು.

Share Post