ಸಮಾಜವಾದಿ ಪಾರ್ಟಿ ನಾಯಕ ಅಜಂ ಖಾನ್‌ಗೆ ಮೂರು ವರ್ಷ ಜೈಲು ಶಿಕ್ಷೆ

ಲಖನೌ; ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಎದುರಿಸುತ್ತಿದ್ದ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶ ನೀಡಿದೆ. ರಾಂಪುರದ ನ್ಯಾಯಾಲಯ ಈ ಆದೇಶ ನೀಡಿದ್ದು, ಆಜಂ ಖಾನ್ ಹಾಗೂ ಮತ್ತಿಬ್ಬರು ಆರೋಪಿಗಳಿಗೆ 2 ಸಾವಿರ ರೂಪಾಯಿ ದಂಡ ಹಾಗೂ 3 ಜೈಲು ಶಿಕ್ಷೆ ವಿಧಿಸಿದೆ.

2019ರಲ್ಲಿ ಅಜಂ ಖಾನ್‌ ಧ್ವೇಷ ಭಾಷಣ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ದ್ವೇಷ ಭಾಷಣ ಮಾಡಿದ್ದರು. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Share Post