ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕಲಬುರಗಿಗೆ ಭೇಟಿ; ಭರ್ಜರಿ ಸ್ವಾಗತ

ಕಲಬುರಗಿ; ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ನಿರಂತರವಾಗಿ ರಾಜ್ಯ ಪ್ರವಾಸ ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಇಂದು ಕಲಬುರಗಿಗೆ ಭೇಟಿ ನೀಡಿದ್ದಾರೆ. ಅವರು ಕಲಬುರಗಿಗೆ ಬಂದಿಳಿಯುತ್ತಿದ್ದಂತೆ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು.

ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷವನ್ನು ಸಜ್ಜುಗೊಳಿಸಲು ಉದ್ದೇಶದಿಂದ ಡಿ.ಕೆ.ಶಿವಕುಮಾರ್‌ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು, ಅಲ್ಲಿ ಸ್ಥಳೀಯ ಮುಖಂಡರು ಆಯೋಜಿಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Share Post

Leave a Reply

Your email address will not be published.