ಅರಣ್ಯ ವೀಕ್ಷಕ ನಾಪತ್ತೆ; ನದಿಗೆ ಬಿದ್ದಿರುವ ಶಂಕೆ..!

ಮಡಿಕೇರಿ; ವಿರಾಜಪೇಟೆ ತಾಲೂಕಿನ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯದಲ್ಲಿದ್ದ ಅರಣ್ಯ ವೀಕ್ಷಕ ನಾಪತ್ತೆಯಾಗಿದ್ದಾರೆ. ಪವನ್ (23) ನಾಪತ್ತೆಯಾದ ಅರಣ್ಯ ವೀಕ್ಷಕ ಎಂದು ತಿಳಿದುಬಂದಿದೆ.

ಮೂಲತಃ ಬಾಳೆಲೆ ಗ್ರಾಮದ ಪವನ್ ಮಾಕುಟ್ಟ ಅರಣ್ಯ ವ್ಯಾಪ್ತಿಯಲ್ಲಿ ಕರ್ತವ್ಯನಿರತರಾಗಿದ್ದ ವೇಳೆ ನಾಪತ್ತೆಯಾಗಿದ್ದಾರೆ. ಕಾಲು ಜಾರಿ ನದಿಗೆ ಬಿದ್ದಿರುವ ಶಂಕೆ ವ್ಯಕ್ತವಾಗುತ್ತಿದೆ.  ಇದೀಗ ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮದಲ್ಲಿ ನಾಪತ್ತೆಯಾದ ಪವನ್ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Share Post

Leave a Reply

Your email address will not be published.