ಪೇಸಿಎಂ ಅಭಿಯಾನ ಕಾಂಗ್ರೆಸ್‌ನ ಡರ್ಟಿ ಪಾಲಿಟಿಕ್ಸ್‌; ಬೊಮ್ಮಾಯಿ

ಚಿತ್ರದುರ್ಗ; ಕಾಂಗ್ರೆಸ್ ಪಕ್ಷದಿಂದ ನಡೆಸುತ್ತಿರುವ ಪೇ ಸಿಎಂ ಅಭಿಯಾನವೊಂದು ಡರ್ಟಿ ಪಾಲಿಟಿಕ್ಸ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿರಿಗೆರೆ ಗ್ರಾಮದ ತರಳಬಾಳು ಮಠದಲ್ಲಿ ನಡೆಯುತ್ತಿರುವ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳ 30ನೇ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಳ್ಳುವ ಮುನ್ನ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪೇ ಸಿಎಂ ಅಭಿಯಾನ ಕಾಂಗ್ರೆಸ್ ನಾಯಕರ ನೈತಿಕ ಅಧಃಪತನ ತೋರಿಸುತ್ತದೆ. ಪೇ ಸಿಎಂ ಅಭಿಯಾನದ ಬಗ್ಗೆ ಕಾನೂನು ಕ್ರಮಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಪಿಎಫ್‍ಐ ಮತ್ತು ಎಸ್‍ಡಿಪಿಐ ಕಚೇರಿ, ಮುಖಂಡರ ಮನೆ ಮೇಲೆ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ಎನ್‍ಐಎ ಹಾಗೂ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಸಮೀಕ್ಷೆಗಳು ನಡೆಸಲಾಗುತ್ತಿದ್ದು, ಇದರಲ್ಲಿ ಕಾಂಗ್ರೆಸ್ ಹೆಚ್ಚಿನ ಸಂಖ್ಯೆ ಗಳಿಸಲಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಜನರ ನಾಡಿ ಮಿಡಿತ ನಮಗೂ ಗೊತ್ತಿದೆ. 35 ವರ್ಷ ನಾವೂ ರಾಜಕಾರಣ ಮಾಡಿದ್ದು, ಮುಂದಿನ ದಿನಗಳಲ್ಲಿ ತಾವುಗಳೇ ನೋಡುತ್ತೀರಾ ಎಂದಿದ್ದಾರೆ.

Share Post

Leave a Reply

Your email address will not be published.