ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ

ಮಂಗಳೂರು; ಮಂಗಳೂರಿನಲ್ಲಿ ನಡೆಯಬಹುದಾಗಿದ್ದ ದುರ್ಘಟನೆಯೊಂದು ತಪ್ಪಿದೆ. ಟೇಕಾಫ್‌ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ಪೈಲಟ್‌ ಸಮಯಪ್ರಜ್ಞೆಯಿಂದ ಆಗಬಹುದಾಗಿದ್ದ ಅಪಾಯ ತಪ್ಪಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ.

ಇಂದು ಬೆಳಗ್ಗೆ 8.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಇಂಡಿಗೋ ವಿಮಾನ ಟ್ಯಾಕ್ಸಿ ವೇ ದಾಟಿ ರನ್‌ ವೇ ನಲ್ಲಿ ಸಾಗುತ್ತಿತ್ತು. ಈ ವೇಳೆ ವಿಮಾನದ ರೆಕ್ಕೆಗೆ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಕೂಡಲೇ ಎಚ್ಚೆತ್ತ ಪೈಲಟ್‌, ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಟೇಕಾಫ್‌ ಆಗುವುದನ್ನು ನಿಲ್ಲಿಸಿ, ನಿಲ್ದಾಣಕ್ಕೆ ವಾಪಸ್ಸಾಗಿದ್ದಾರೆ.

Share Post