ಸೇಡಂನಲ್ಲಿ ಹಾಡಹಗಲೇ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಕಲಬುರಗಿ; ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆಯಾಗಿದೆ. ಹಾಡಹಗಲೇ ಕೊಚ್ಚಿ ಕೊಲೆ ಮಾಡಲಾಗಿದ್ದು, ಸೇಡಂ ಪಟ್ಟಣ ಬೆಚ್ಚಿಬಿದ್ದಿದೆ. ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮುತ್ಯಾಲ ಕೊಲೆಯಾದ ಬಿಜೆಪಿ ಮುಖಂಡ ಎಂದು ಗುರುತಿಸಲಾಗಿದೆ.

ಮಲ್ಲಿಕಾರ್ಜುನ ಮುತ್ಯಾಲ ಅವರು ರಾಜಕೀಯದ ಜೊತೆಗೆ ಎಲೆಕ್ಟ್ರಾನಿಕ್‌ ಶಾಪ್‌ ಒಂದನ್ನು ಕೂಡಾ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಅಆಂಗಡಿಯಲ್ಲಿದ್ದಾಗ, ಅಲ್ಲಿಗೇ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಸೇಡಂ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Share Post