ನಾಳೆ ಸಂಜೆಯೊಳಗೆ ಕೈ ಅಭ್ಯರ್ಥಿಗಳ ಮೊದಲ ಪಟ್ಟಿ; ನೂರಕ್ಕೂ ಹೆಚ್ಚು ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ

ಮಂಡ್ಯ; ಕೊನೆಗೂ ಕಾಂಗ್ರೆಸ್‌ ಮೊದಲ ಪಟ್ಟಿ ಸಿದ್ಧವಾಗಿದೆ. ನಾಳೆ ಸಂಜೆಯೊಳಗೆ ನೂರಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡೋದಕ್ಕೆ ಕಾಂಗ್ರೆಸ್‌ ಸಿದ್ಧವಾಗಿದೆ. ಯುಗಾದಿ ಹಬ್ಬದ ದಿನ ಮೊದಲ ಪಟ್ಟಿ ರಿಲೀಸ್‌ ಆಗುತ್ತಿದೆ. ಹೀಗಾಗಿ ಎಲ್ಲರಲ್ಲೂ ಕುತೂಹಲ ಗರಿಗೆದರಿದೆ.

ಇನ್ನು ನಾಳೆ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆಯಾಗುತ್ತೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಖಚಿತಪಡಿಸಿದ್ದಾರೆ. ಆದಿಚುಂಚನಗಿರಿ ಮಠದಲ್ಲಿ ಕಾಲಭೈರವೇಶ್ವರನಿಗೆ ಪೂಜೆ ಸಲ್ಲಿಸಿದ ನಂತರ ಅವರು ಈ ವಿಚಾರನ್ನು ಹೇಳಿದ್ದಾರೆ. ನಾಳೆ ನೂರಕ್ಕೂ ಹೆಚ್ಚು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

Share Post