ಕಾಂಗ್ರೆಸ್‌ ಮಾಜಿ ಶಾಸಕ ವಾಸು ಪುತ್ರ ಕವೀಶ್‌ ಗೌಡ ಬಿಜೆಪಿ ಸೇರ್ಪಡೆ

ಬೆಂಗಳೂರು; ಮೈಸೂರಿನಲ್ಲಿ ಕಮಲ ಪಕ್ಷ ಬಿಗ್‌ ಆಪರೇಷನ್‌ ಮಾಡಿದೆ. ಮೈಸೂರಿನ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಪುತ್ರ ಕವೀಶ್‌ ಗೌಡ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಒಕ್ಕಲಿಗ ಯುವ ನಾಯಕನನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಂಡಂತಾಗಿದೆ.

ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಿರ್ಮಲ ಸುರಾನಾ ನೇತೃತ್ವದಲ್ಲಿ ಕವೀಶ್‌ ಗೌಡ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೇ 30 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

Share Post

Leave a Reply

Your email address will not be published.