ಎಚ್‌.ವಿಶ್ವನಾಥ್‌ ಮಂತ್ರಾಲಯಕ್ಕೆ ಭೇಟಿ; ಶೀಘ್ರದಲ್ಲೇ ಕಾಂಗ್ರೆಸ್‌ ಸೇರ್ಪಡೆ..?

ರಾಯಚೂರು; ಬಿಜೆಪಿಯಿಂದ ವಿಧಾನಪರಿಷತ್‌ ಸದಸ್ಯರಾಗಿರುವ ಮಾಜಿ ಸಚಿವ ಎಚ್‌.ವಿಶ್ವನಾಥ್‌ ಮತ್ತೆ ಕಾಂಗ್ರೆಸ್‌ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ. ಅದಕ್ಕಿಂತ ಮೊದಲು ಅವರು ದೇವರ ಮೊರೆ ಹೋಗಿದ್ದಾರೆ. ಇಂದು ಬೆಳಗ್ಗೆ ವಿಶ್ವನಾಥ್‌ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ವಿಶ್ವನಾಥ್‌ ಅವರು ಯಾವುದೇ ರಾಜಕೀಯ ನಿರ್ಧಾರ ತೆಗೆದುಕೊಳ್ಳುವ ಮುನ್ನ ಮಂತ್ರಾಲಯಕ್ಕೆ ಭೇಟಿ ನೀಡುತ್ತಾರೆ. ಈ ಬಾರಿಯೂ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ಆಶೀರ್ವಾದ ಪಡೆದಿದ್ದಾರೆ. ಶೀಘ್ರದಲ್ಲೇ ಅವರು ಕಾಂಗ್ರೆಸ್‌ ಸೇರುತ್ತಾರೆ ಎನ್ನಲಾಗುತ್ತಿದೆ. ಈಗಾಗಲೇ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

Share Post

Leave a Reply

Your email address will not be published.