ರಿಯಲ್‌ ಎಸ್ಟೇಟ್‌ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

ಧಾರವಾಡ; ಮನೆ ಎದುರು ಕುಳಿತಿದ್ದವರ ಮೇಲೆ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿದ್ದು, ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಧಾರವಾಡ ನಗರದ ಕಮಲಾಪುರದ ಹೊರವಲಯದಲ್ಲಿ ಈ ಕೃತ್ಯ ಎಸಗಲಾಗಿದೆ.

ರಿಯಲ್‌ ಎಸ್ಟೇಟ್‌ ಉದ್ಯಮಿ ಮಹಮದ್‌ ಕುಡಚಿ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಹತ್ಯೆಗೈಯ್ಯಲಾಗಿದೆ, ಇಬ್ಬರು ಮಹಮದ್‌ ಕುಡಚಿ ಅವರ ಮನೆ ಬಳಿ ಕುಳಿತಿದ್ದರು. ಮಹಮದ್‌ ಅವರು ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಓಡಿದರೂ ಬಿಡದೇ ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಇದರಿಂದಾಗಿ ರಸ್ತೆಯುದ್ಧಕ್ಕೂ ರಕ್ತ ಚೆಲ್ಲಾಡಿದೆ. ಮನೆಯಿಂದ ಸ್ವಲ್ಪ ದೂರದಲ್ಲಿ ಮತ್ತೊಬ್ಬ ದೇಹ ಪತ್ತೆಯಾಗಿದೆ. ಆದ್ರೆ ಆತನ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ.

ಮೂರು ಮಾರಾಕಾಸ್ತ್ರಗಳನ್ನು ಬಳಸಿ ಕೊಲೆ ಮಾಡಲಾಗಿದೆ. ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share Post