ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಆಸ್ಪತ್ರೆಯಲ್ಲಿ ಸಾವು

ಹಾಸನ; ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆಯ ಯೋಧ ಹೆಚ್‌.ಬಿ.ಚನ್ನಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನವೆಂಬರ್ 19 ರಂದು ಮನೆಗೆ ತೆರಳುತ್ತಿದ್ದಾಗ ಬೆಂಗಳೂರಿನ ಹುಣಸಮಾರನಹಳ್ಳಿ ಬಳಿ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು.

ಮೃತ ಚನ್ನಬಸಪ್ಪ ಅವರು ಹಾಸನ ಜಿಲ್ಲೆ ಆಲೂರು ತಾಲೂಕಿನ ಚಿಕ್ಕಕಣಗಾಲು ಗ್ರಾಮದವರು ಎಂದು ತಿಳಿದುಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚನ್ನಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 1968 ರಲ್ಲಿ ಸೇನೆಗೆ ನೇಮಕವಾಗಿದ್ದ ಚನ್ನಬಸಪ್ಪ ಅವರು, ಭಾರತೀಯ ಸೇನೆ, ಭೂಸೇನೆ, ವಾಯುಸೇನೆ, ಜಲಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸದ್ಯ ಅವರು, ಯಲಹಂಕದಲ್ಲಿರುವ ಏರ್‌ಫೋರ್ಸ್‌ನ ಡಿಎಸ್‌ಸಿ ಯೂನಿಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Share Post

Leave a Reply

Your email address will not be published.