ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆ

ಮಂಡ್ಯ; ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಬೆಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಸಾವಿರಕ್ಕೂ ಹೆಚ್ಚು ಬೆಂಬಲಿಗರೊಡನೆ ಬೆಂಗಳೂರಿಗೆ ತೆರಳಿದ್ದ ಸಚ್ಚಿದಾನಂದ ಅವರಯಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಈ ಮೂಲಕ ಅವರು ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೋದು ಬಹುತೇಕ ಖಚಿತವಾದಂತಾಗಿದೆ.

ಈ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಅಶ್ವಥ್ ನಾರಾಯಣ, ಗೋಪಾಲಯ್ಯ, ನಾರಾಯಣಗೌಡ, ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್, ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ ಮುಂತಾದವರು ಭಾಗಿಯಾಗಿದ್ದರು.

Share Post

Leave a Reply

Your email address will not be published.