ಆತಂಕ ಹೆಚ್ಚಾದಾಗ ಕ್ಷೇತ್ರ ಬದಲಾವಣೆ ಮಾಡ್ತಾರೆ; ಬಿ.ವೈ.ರಾಘವೇಂದ್ರ ಲೇವಡಿ

ರಾಯಚೂರು; ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ನಡೆಸುತ್ತಿರುವುದನ್ನು ಸಂಸದ ಬಿ.ವೈ.ರಾಘವೇಂದ್ರ ಲೇವಡಿ ಮಾಡಿದ್ದಾರೆ. ಯಾವಾಗ ಆತಂಕ ಹೆಚ್ಚಾಗುತ್ತೋ ಆಗ ಕ್ಷೇತ್ರ ಬದಲಾವಣೆ ನಡೆಯುತ್ತೆ ಎಂದು ಸಿದ್ದರಾಮಯ್ಯ ಅವರ ಹೆಸರನ್ನು ಹೇಳದೇ ಸಂಸದ ರಾಘವೇಂದ್ರ ಲೇವಡಿ ಮಾಡಿದ್ದಾರೆ.

ರಾಯಚೂರಿಗೆ ಭೇಟಿ ನೀಡಿದ್ದ ಅವರು, ಸಿದ್ದರಾಮಯ್ಯ ಅವರ ಕ್ಷೇತ್ರ ಬದಲಾವಣೆ ಬಗ್ಗೆ ಮಾತನಾಡಿದರು. ಸಿದ್ದರಾಮಯ್ಯ ಅವ್ರು ಕೋಲಾರದಿಂದ ಸ್ಪರ್ಧೆ ಮಾಡುವುದು ಅವರ ವೈಯಕ್ತಿಕ ವಿಚಾರ. ಈಗಿರುವ ಕ್ಷೇತ್ರದಲ್ಲಿ ಒಳ್ಳೆಯ ಕೆಲಸ ಮಾಡಿದ್ದರೆ  ಸ್ಟೆಬಿಲಿಟಿ ಅಂತೂ ಇರ್ತಾ  ಇತ್ತು. ಅದು ಇಲ್ಲದಿದ್ದಕ್ಕೆ ಕ್ಷೇತ್ರ ಬದಲಾವಣೆ ಮಾಡ್ತಿದ್ದಾರೆ. ಜನ ಚುನಾವಣೆ ಸಮಯದಲ್ಲಿ ನೋಡಿಕೊಳ್ಳುತ್ತಾರೆ ಎಂದು ರಾಘವೇಂದ್ರ ಹೇಳಿದರು.

ಕಾಂಗ್ರೆಸ್ ನಾಯಕರಿಗೆ ಸೋಲೋ ಭೀತಿ ಶುರುವಾಗಿದೆ. ರಾಹುಲ್ ಗಾಂಧಿ ಭಾರತ್ ಜೋಡೋ ಹೆಸರೇಳಿಕೊಂಡು ಕಾಂಗ್ರೆಸ್ ಜೋಡಿಸೋದಕ್ಕೆ ಶತಪ್ರಯತ್ನ ಮಾಡುತ್ತಿದ್ದಾರೆ. ಆದ್ರೆ ಕಾಂಗ್ರೆಸ್‌ ಪಕ್ಷ ಈಗ ಪ್ರಾದೇಶಿಕ ಪಕ್ಷಕ್ಕಿಂತ ಕಡೆಯಾಗಿದೆ ಎಂದು ಹೇಳಿದರು.

 

Share Post