ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು; ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಬೊಮ್ಮಾಯಿ ಹಾಗೂ ಅವರ ಇತರ ಸಂಪುಟ ಸಹೋದ್ಯೋಗಿಗಳು ಪದ್ಮನಾಭನಗರದ ಗೌಡರ ನಿವಾಸಕ್ಕೆ ಭೇಟಿ ನೀಡಿದ್ದರು. ಗೌಡರು ಹೂಗುಚ್ಛ ನೀಡಿ ಸಿಎಂ ಅವರನ್ನು ಸ್ವಾಗತಿಸಿದರು.

ಸಿಎಂ ಬೊಮ್ಮಾಯಿ ಜೊತೆಗೆ ಸಚಿವರಾದ ಆರ್. ಅಶೋಕ್, ಸೋಮಣ್ಣ, ಕೆ. ಗೋಪಾಲಯ್ಯ, ಭೈರತಿ ಬಸವರಾಜ, ಮುನಿರತ್ನ, ಮಾಧುಸ್ವಾಮಿ ಹಾಗೂ ಆನಂದ್ ಸಿಂಗ್ ಇದ್ದರು. ವಿಧಾನಮಂಡಲದ ಅಧಿವೇಶನ ನಡೆಯುತ್ತಿದ್ದು, ಅಧಿವೇಶನದ ಮಧ್ಯೆ ದೇವೇಗೌಡರ ಯೋಗಕ್ಷೇಮ ವಿಚಾರಿಸಲು ಸಚಿವರೆಲ್ಲ ಬಂದಿದ್ದರು. ಇತ್ತೀಚೆಗೆ ಯಡಿಯೂರಪ್ಪ, ಸಿದ್ದರಾಮಯ್ಯ ಅವರು ಕೂಡಾ ದೇವೇಗೌಡರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದರು.

Share Post

Leave a Reply

Your email address will not be published.