ಮಹಾ ಸಿಎಂ ಉದ್ಧಟತನಕ್ಕೆ ಹೆಚ್‌ಡಿಕೆ ಚಾಟಿ ಏಟು

ಬೆಂಗಳೂರು: ಶಿವಾಜಿ ಪ್ರತಿಮೆ ವಿರೂಪಗೊಳಿಸಿದ ವಿಚಾರಕ್ಕೆ ಮಹಾರಾಷ್ಟ್ರ ಸಿಎಂ ಹೇಳಿಕೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನನು ವಿರೂಪಗೊಳಿಸಿದ ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರತಾಪ ತೋರಿಸುವುದು ಬೇಡ. ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ? ಎಂದು ಪ್ರಶ್ನಿಸಿದ್ದಾರೆ. ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋನ. ಹಾಗಂತ ಸ್ವಾತಂತ್ರ್ಯ ಹೋಎಆಟಗಾರ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣನವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು? ವಿಕೃತ ಮನಸ್ಸು ಯಾರದ್ದು ಎಂದು ಉದ್ಧವ್‌ ಠಾಕ್ರೆ ಅರ್ಥ ಮಾಡಿಕೊಂಡ್ರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣನವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ. ಕತ್ತಲಾದ ಮೇಲೆ ಹೇಡಿಗಳಂತೆ ನುಸುಳಿ ವಾಹನಗಳ ಮೇಲೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್‌ ರಾಷ್ಟ್ರಪ್ರೇಮಿ, ಕೆಚೆದೆಯ ವೀರರಾದ ರಾಯಣ್ಣನವರ ಪ್ರತಿಮೆಗೆ ಹಾಣಿ ಮಾಡಿದ್ದು ನಿಜವಾದ ವಿಕೃತಿ. ಮಹಾರಾಷ್ಟ್ರ ಸಿಎಂ ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಟ್ವೀಟ್‌ ಮಾಡಿದ್ದಾರೆ.

Share Post

Leave a Reply

Your email address will not be published.