ಶನಿವಾರ ಸಂಪುಟ ವಿಸ್ತರಣೆ ಫಿಕ್ಸ್;‌ ಆದ್ರೆ ಇನ್ನೂ ಮೂಡದ ಒಮ್ಮತ

ಬೆಂಗಳೂರು;  ಮೇ 27ರಂದು ಬೆಳಗ್ಗೆ 11.45ಕ್ಕೆ ಸಂಪುಟ ವಿಸ್ತರಣೆ ಹಾಗೂ  ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಫಿಕ್ಸ್‌ ಆಗಿದೆ. ಅಂದು 18-24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಸರ್ಕಾರದ ಮನವಿ ಹಿನ್ನೆಲೆಯಲ್ಲಿ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಪಾಲರು ಆದೇಶ ಮಾಡಿದ್ದಾರೆ.

   ಹೀಗಿದ್ದರೂ ಇನ್ನೂ ಸಿಎಂ ಹಾಗೂ ಡಿಸಿಎಂ ನಡುವೆ ಒಮ್ಮತ ಮೂಡಿಲ್ಲ. ಹಿರಿಯ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಭಿನ್ನಾಭಿಪ್ರಾಯ ಮೂಡಿದೆ ಎಂದು ಹೇಳಲಾಗುತ್ತಿದೆ. ಸಿದ್ದರಾಮಯ್ಯ ಅವರು ಆರ್‌.ವಿ.ದೇಶಪಾಂಡೆ ಸೇರಿ ಹಲವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಒತ್ತಡ ಹಾಕುತ್ತಿದ್ದಾರೆ. ಆದ್ರೆ ಡಿ.ಕೆ.ಶಿವಕುಮಾರ್‌ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇವರಿಗೆ ಬದಲಾಗಿ ಮಧು ಬಂಗಾರಪ್ಪ ಹಾಗೂ ಬಿ.ಕೆ.ಹರಿಪ್ರಸಾದ್‌ಗೆ ಸಚಿವ ಸ್ಥಾನ ನೀಡುವಂತೆ ಡಿ.ಕೆ.ಶಿವಕುಮಾರ್‌ ಪಟ್ಟು ಹಿಡಿದಿದ್ದಾರೆ.
    ಆದರೆ ಸಿದ್ದರಾಮಯ್ಯ ಅವರು ಒಂದೇ ಸಮುದಾಯದ ಇಬ್ಬರಿಗೆ ಸಚಿವ ಸ್ಥಾನ ಬೇಡ ಎಂದು ಹೇಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ನಾಲ್ಕೈದು ಹೆಸರುಗಳನ್ನು ಅಂತಿಮಗೊಳಿಸಲು ಇಬ್ಬರಲ್ಲೂ ಒಮ್ಮತ ಮೂಡಿಲ್ಲ. ಹೀಗಾಗಿ ನಾಳೆಯೂ ಈ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

 

Share Post