ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್‌ ಮಂಡನೆ?; ಜನವರಿ 31ರಿಂದ ಬಜೆಟ್‌ ಅಧಿವೇಶನ

ನವದೆಹಲಿ; 2023-24ರ ಸಂಸತ್ ಬಜೆಟ್ ಅಧಿವೇಶನ ಜನವರಿ 31 ರಿಂದ ಶುರುವಾಗಲಿದೆ. ಏಪ್ರಿಲ್ 6 ರಂದು ಅಧಿವೇಶನ ಮುಗಿಯಲಿದ್ದು, ಫೆಬ್ರವರಿ 1 ರಂದು ಬಜೆಟ್‌ ಮಂಡನೆಯಾಗಲಿದೆ. ಕೇಂದ್ರ ಬಜೆಟ್ 2023-24ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ಭಾಗ ಫೆಬ್ರವರಿ 10 ರವರೆಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಆದ್ರೆ ಸರ್ಕಾರದಿಂದ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ.

ಮೊದಲ ದಿನ ಸಂಸತ್ತಿನ ಉಭಯ ಸದನದಲ್ಲಿ ಆರ್ಥಿಕ ಸಮೀಕ್ಷೆ ಮಂಡಿಸಲಾಗುತ್ತದೆ. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಿ, ಅಧಿವೇಶನವನ್ನು ಪ್ರಾರಂಭಿಸುವ ನಿರೀಕ್ಷೆಯಿದೆ.

Share Post

Leave a Reply

Your email address will not be published.