ಗುಜರಾತ್‌ನಲ್ಲಿ ಮೊದಲ ಹಂತದ ಮತದಾನ; ದಾಖಲೆ ಮತ ಚಲಾಯಿಸಲು ಮೋದಿ ಕರೆ

ಅಹಮದಾಬಾದ್; ಗುಜರಾತ್ ವಿಧಾನಸಭೆಗೆ ಇಂದು ಮೊದಲು ಹಂತದ ಮತದಾನ ನಡೆಯುತ್ತಿದೆ. ಸೌರಾಷ್ಟ್ರ, ಕಛ್ ಸೇರಿದಂತೆ ಒಟ್ಟು 19 ಜಿಲ್ಲೆಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಮತದಾರರು ಎಲ್ಲಾ ಮತಗಟ್ಟೆಗಳಲ್ಲಿ ಸಾಲುಗಟ್ಟಿ ನಿಂತಿದ್ದಾರೆ. 70 ಮಹಿಳೆಯರು ಸೇರಿ ಒಟ್ಟಾರೆ 788 ಅಭ್ಯರ್ಥಿಗಳ ಭವಿಷ್ಯ ಇಂದು ಮತಪೆಟ್ಟಿಗೆ ಸೇರಲಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆಯಬೇಕೆಂದು ಗುಜರಾತ್‌ ಮತದಾರರಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ನರೇಂದ್ರ ಮೋದಿ ಅವರು, ಮತದಾನ ಮಾಡುವ ಎಲ್ಲಾ ಮತದಾರರಿಗೂ ಹಾಗೂ ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಬೇಕು ಎಂದು ಕರೆಕೊಟ್ಟಿದ್ದಾರೆ.

Share Post

Leave a Reply

Your email address will not be published.