ಮತದಾರರ ಮಾಹಿತಿಗೆ ಕನ್ನ; ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್‌ ದೂರು

ನವದೆಹಲಿ; ಮತದಾರರ ಮಾಹಿತಿಗೆ ಕನ್ನ ಪ್ರಕರಣ ಸಂಬಂಧ ಸೂಕ್ತ ಕ್ರಮ ಆಗಬೇಕು ಎಂದು ಆಗ್ರಹಿಸಿ ಕೆಪಿಸಿಸಿ ವತಿಯಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ಮತದಾರರಲ್ಲಿ ಜಾಗೃತಿ ಮೂಡಿಸುವ ಹೆಸರಿನಲ್ಲಿ ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿಗೆ ಕನ್ನ ಹಾಕಲಾಗಿದೆ. ಇದರ ಹಿಂದೆ ರಾಜಕೀಯ ಶಕ್ತಿಗಳು ಕೆಲಸ ಮಾಡಿವೆ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ. ಮತದಾರರ ಮಾಹಿತಿ ಸಂಗ್ರಹಕ್ಕೆ ಖಾಸಗಿ ಸಂಸ್ಥೆ ಗುತ್ತಿಗೆ ನೀಡಿರುವುದು ಕಾನೂನು ಪ್ರಕಾರ ಅಪರಾಧ. ಮತದಾರರ ಪಟ್ಟಿಯಿಂದ ಸಾವಿರಾರು ಮತದಾರರನ್ನು ಕೈಬಿಡಲಾಗಿದೆ. ಬಿಜೆಪಿಯನ್ನು ವಿರೋಧಿಸುವ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಡಿಲೀಟ್‌ ಮಾಡಲಾಗಿದೆ. ಇದಕ್ಕೆ ಸರ್ಕರವೇ ಕುಮ್ಮಕ್ಕು ನೀಡಿದೆ ಎಂದು ಕಾಂಗ್ರೆಸ್‌ ಆರೋಪ ಮಾಡಿದೆ.

ಈ ಸಂಬಂಧ ಕೇಂದ್ರ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಲಾಗಿದೆ.

Share Post