ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಕೊಚ್ಚಿ; ಭಾರತದ ಮೊದಲ ದೇಶೀಯ ನಿರ್ಮಿತ ಯುದ್ಧ ವಿಮಾನ ವಾಹಕ ನೌಕೆ ಐಎನ್‌ಎಸ್‌ ವಿಕ್ರಾಂತ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. 20,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೌಕೆಗೆ ಕೊಚ್ಚಿಯ ’ಶಿಪ್ ಯಾರ್ಡ್ ಲಿಮಿಟೆಡ್’ ನಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಪ್ರಧಾನಿ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ವಲಯವನ್ನು ಸ್ವಾವಲಂಬಿಯನ್ನಾಗಿ ಮಾಡುವ ನಮ್ಮ ಸರ್ಕಾರದ ಬದ್ಧತೆಗೆ ವಿಕ್ರಾಂತ್‌ ಒಂದು ಉದಾಹರಣೆ. ಭಾರತವು ಯುದ್ಧವಿಮಾನ ವಾಹಕವನ್ನು ನಿರ್ಮಾಣ ಮಾಡಬಲ್ಲ ಸಾಮರ್ಥ್ಯ ಹೊಂದಿರುವ ರಾಷ್ಟ್ರಗಳ ಪಟ್ಟಿಗೆ ಸೇರ್ಪಡೆ ಗೊಂಡಂತಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ ಸಿಂಗ್, ನೌಕಾಯಾನ ಸಚಿವ ಸರಬಾನಂದ ಸೋನೋವಾಲ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಎರ್ನಾಕುಲಂ ಸಂಸದ ಹಿಬಿ ಈಡನ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ನೌಕಾಪಡೆಯ ಉನ್ನತ ಅಧಿಕಾರಿಗಳು ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು.

Share Post

Leave a Reply

Your email address will not be published.