ಭೀಕರ ರಸ್ತೆ ಅಪಘಾತದಲ್ಲಿ ಮೂವರ ಸಾವು..!

ಹೌರಾ( ಪಶ್ಚಿಮ ಬಂಗಾಳ); ಹೌರಾ ರಾಣಿಹಟಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನೆಲ್ಲ ಹೌರಾ ಆಸ್ಪತ್ರೆಗೆ ದಾಖಲಿಸಲಾಗಿದೆ.

      ಅಪಘಾತದಲ್ಲಿ ಪೋಲೀಸ್​ ಒಬ್ಬರು ಕೂಡಾ ಸಾವನ್ನಪ್ಪಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಆ ವೇಳೆ, ಪೊಲೀಸರು ರಸ್ತೆ ಮಧ್ಯೆ ಕಂಟೈನರ್ ನಿಲ್ಲಿಸಿ ಹಣ ವಸೂಲಿ ಮಾಡುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ್​​​​ ಟ್ರಕ್​, ನಿಯಂತ್ರಣ ಸಾಧ್ಯವಾಗದೇ ಮುಂದೆ ನಿಂತಿದ್ದ ಕಂಟೈನರ್​ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟೈನರ್ ಚಾಲಕ ಪರಾರಿಯಾಗಿದ್ದಾನೆ. ಟ್ರಕ್ ಚಾಲಕ ಅಖ್ತರ್ ಅನ್ಸಾರಿ, ನಾಗರಿಕ ಸ್ವಯಂಸೇವಕ ಅರಿಂದಮ್ ಬಿಸ್ವಾಸ್ ಮತ್ತು ಪೊಲೀಸ್ ಉಜ್ಜಲ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಈ ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಿ ಒಬ್ಬರನ್ನು ಅಂದೂಲ್ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಹೌರಾ ಆಸ್ಪತ್ರೆಗೆ ಕರೆತರಲಾಗಿದೆ.

Share Post

Leave a Reply

Your email address will not be published.